ಯಲ್ಲಾಪುರ:
ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ, ಯಲ್ಲಾಪುರ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸವಣಗೇರಿ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 21, 2026ರಂದು ‘ಪತ್ರಿಕಾ ದಿನಾಚರಣೆ ಹಾಗೂ ವನಮಹೋತ್ಸವ’ ಕಾರ್ಯಕ್ರಮವನ್ನು ಸವಣಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಬಿದ್ರೆಮನೆ ಹೇಳಿದರು.
ಅವರು ಶುಕ್ರವಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಅಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ತಿನ ಸದಸ್ಯ ಶಾಂತಾರಾಮ ಸಿದ್ದಿ, ತಹಸೀಲ್ದಾರ್ ಎಂ. ಆರ್. ಕುಲಕರ್ಣಿ, ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ವಿವಿಧ ಸಂಘಟನೆಗಳ ಪ್ರಮುಖರಾದ ಎ.ಎ.ಶೇಖ್, ಶೇಷಗಿರಿ ಪ್ರಭು, ನರಸಿಂಹ ಅಡಿ, ವಿಠ್ಠಲದಾಸ ಕಾಮತ್, ಗೋಪಾಲಕೃಷ್ಣ ಭಟ್ಟ, ಶಿಲ್ಪಾ ನಾಯ್ಕ, ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ನರಸಿಂಹ ಸಾತೋಡ್ಡಿ, ಕೆ. ಎಸ್. ಭಟ್ಟ ಅನಗೋಡ ಮತ್ತು ವ್ಯಂಗ್ಯ ಚಿತ್ರಕಾರರಾದ ಶ್ರೀ ನಾಗೇಂದ್ರ ಯಲ್ಲಾಪುರ ಅವರನ್ನು ಸನ್ಮಾನಿಸಲಾಗುವುದು. ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಅಭಿನಂದನಾ ನುಡಿಗಳನ್ನಾಡಲಿದ್ದಾರೆ ಎಂದು ವಿವರಿಸಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಭಾವತಿ ಗೋವಿ, ಜಿಲ್ಲಾ ಸಮಿತಿ ಸದಸ್ಯ ಜಯರಾಜ ಗೋವಿ, ತಾಲೂಕು ಸಂಘದ ಉಪಾಧ್ಯಕ್ಷ ಶ್ರೀಧರ ಅಣಲಗಾರ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ನಾಯ್ಕ, ಸದಸ್ಯ ಕೆ.ಎಸ್ ಭಟ್ಟ ಆನಗೋಡ ಉಪಸ್ಥಿತರಿದ್ದರು.
ಜುಲೈ 21 ರಂದು ಸವಣಗೇರಿಯಲ್ಲಿ ಪತ್ರಿಕಾ ದಿನಾಚರಣೆ – ಸುಬ್ರಾಯ ಬಿದ್ರೆಮನೆ













Leave a Reply