ಶಿರಸಿ: ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ರೌಡಿಶೀಟರ್ ರಾಘವೇಂದ್ರ ಸಿದ್ದಣ್ಣ ಕಂಬಳಿ ( ರಾಘು ಕಂಬಳಿ)ಯನ್ನು ಶಿರಸಿ ನಗರ ಪೊಲೀಸರು ನ್ಯಾಯಾಂಗ ಬಂಧನದಿಂದ ವಶಕ್ಕೆ ಪಡೆದು ಘಟನೆ ನಡೆದ ಸ್ಥಳಕ್ಕೆ ಕರೆತಂದು ಮಹಜರು ನಡೆಸಿದರು.
ಶಿರಸಿ ನಗರದ ಡ್ರೈವರ್ ಕಟ್ಟೆ ಪ್ರದೇಶದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು ಈ ಹಿಂದೆ ಕುಮಟಾ ನ್ಯಾಯಾಲಯದಲ್ಲಿ ಶರಣಾಗಿದ್ದ. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು ತನಿಖೆಯ ಭಾಗವಾಗಿ ಘಟನಾ ಸ್ಥಳಕ್ಕೆ ಕರೆತಂದು ಪಂಚರ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಲಾಯಿತು.
ಶಿರಸಿಯ ಗಾಂಧಿನಗರ ನಿವಾಸಿಯಾಗಿರುವ ರಾಘು ಕಂಬಳಿ ವಿರುದ್ಧ ಈ ಹಿಂದೆಯೂ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದು, ರೌಡಿಶೀಟರ್ ಪಟ್ಟಿಯಲ್ಲಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.
ಸಿಪಿಐ ಇ.ಸಿ. ಸಂಪತ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದರು.
ರೌಡಿಶೀಟರ್ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾನೂನುಬದ್ಧವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಶಿರಸಿ ಪೊಲೀಸರು ದಿಟ್ಟ ಕಾರ್ಯಾಚರಣೆ ಮುಂದುವರಿಸಿದ್ದಾರೆ.













Leave a Reply