ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷ ರಹಿತವಾಗಿಸಲು ಶಾಸಕ ಶಿವರಾಮ ಹೆಬ್ಬಾರ್ ಕರೆ….

ಹಂಚಿಕೊಳ್ಳಿ

ಬನವಾಸಿ,:  ಜುಲೈ 20 :  ಶಾಸಕರಾದ ಶಿವರಾಮ ಹೆಬ್ಬಾರ್ ಹಾಗೂ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಅವರು ಇಂದು ಬನವಾಸಿ ಹೋಬಳಿ ವ್ಯಾಪ್ತಿಯ ಉಂಚಳ್ಳಿ, ಅಂಡಗಿ, ಬಂಕನಾಳ, ಬಿಸ್ಲಕೊಪ್ಪ ಹಾಗೂ ದಾಸನಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಕುರಿತು ಸಭೆ ನಡೆಸಿದರು.

ಸಭೆಯಲ್ಲಿ ಎಸ್.ಐ.ಆರ್. ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷರಹಿತವಾಗಿಸಲು ಸಂಬಂಧಿತ ಕಾರ್ಯಕರ್ತರು ಮತ್ತು ಬೂತ್ ಮಟ್ಟದ ಪದಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ನಾಯಕರು ಸೂಚಿಸಿದರು. ಅಲ್ಲದೆ, ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಸದಸ್ಯ ಸಿ.ಎಫ್. ನಾಯ್ಕ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ಜಿಲ್ಲಾಧ್ಯಕ್ಷರಾದ ಬಸವರಾಜ ದೊಡ್ಮನಿ, ಎಸ್.ಐ.ಆರ್ ಬನವಾಸಿ ಬ್ಲಾಕ್ ಉಸ್ತುವಾರಿ ದ್ಯಾಮಣ್ಣ ದೊಡ್ಮನಿ,, ಯುವ ಕಾಂಗ್ರೆಸ್ ಅಧ್ಯಕ್ಷರಾದ ಉಮಾಕಾಂತ ನಾಯ್ಕ ಸೇರಿದಂತೆ ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *