ಮೂಲೆ ಮೂಲೆಯ ಹಳ್ಳಿಗಳಿಗೂ ಬಸ್ ಭಾಗ್ಯ: ಗ್ರಾಮೀಣ ಜನರ ಸಾರಿಗೆ ಕಷ್ಟ ನೀಗಿಸಿದ ಜನನಾಯಕ ಶಿವರಾಮ ಹೆಬ್ಬಾರ್!”

ಹಂಚಿಕೊಳ್ಳಿ

ಯಲ್ಲಾಪುರ: ಗ್ರಾಮೀಣ ಪ್ರದೇಶದ ಜನತೆಯ ಸಾರಿಗೆ ಸಂಪರ್ಕವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ, ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಳವಳ್ಳಿ ಕ್ರಾಸ್‌ನಲ್ಲಿ “ಹುಣಸಗೇರಿ – ಯಲ್ಲಾಪುರ” ನೂತನ ಬಸ್ ಸಂಚಾರಕ್ಕೆ ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ್ ಬುಧವಾರ ಅಧಿಕೃತವಾಗಿ ಚಾಲನೆ ನೀಡಿದರು.

ನಂತರ  ಮಾತನಾಡಿದ ಅವರು ಗ್ರಾಮೀಣ ಭಾಗದ ಸಾರ್ವಜನಿಕರ, ಉದ್ಯೋಗಿಗಳ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಬಸ್ ಸೇವೆಯನ್ನು ಆರಂಭಿಸಲಾಗಿದೆ. ಇದರಿಂದ ಈ ಭಾಗದ ಜನರ ದೈನಂದಿನ ಸಂಚಾರ ಮತ್ತಷ್ಟು ಸುಗಮವಾಗಲಿದೆ ಎಂದರು.

ದೀರ್ಘಕಾಲದ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಸ್ಥಳೀಯ ಗ್ರಾಮಸ್ಥರು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಎಸ್.ಐ.ಆರ್. ಬ್ಲಾಕ್ ಉಸ್ತುವಾರಿ ಎನ್.ಕೆ. ಭಟ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಾ. ರವಿ ಭಟ್ ಬರಗದ್ದೆ, ತಾಲೂಕು ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಾಕು ಕೊಕರೆ, ಕಿರವತ್ತಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರೆಹಮತ್ ಅಬ್ಬಿಗೇರಿ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ರಾಘವೇಂದ್ರ ಗೊಂದಿ ಸೇರಿದಂತೆ  ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *