ಯಲ್ಲಾಪುರ: ಇಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನೋರ್ವನನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳ ತಾಲೂಕಿನ ಮುಟ್ಟಳ್ಳಿ ಬೆಳಕಬಂದ ನಿವಾಸಿ, 20 ವರ್ಷದ ಬದ್ರುದ್ದೀನ್ ಅಮಾನ ಬಂಧಿತ ಆರೋಪಿಯಾಗಿದ್ದಾನೆ. ಈತ ಹೊಟೇಲ್ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಘಟನೆಯ ವಿವರ:
ದಿನಾಂಕ 31/07/2026 ರಂದು ಸಂಜೆ 16-30 ಗಂಟೆಯ ಸುಮಾರಿಗೆ ಯಲ್ಲಾಪುರ ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಈತ ಗಾಂಜಾ ಮಾದಕ ವಸ್ತುವನ್ನು ಸೇವನೆ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ತಕ್ಷಣವೇ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ (Positive ಬಂದಿದೆ).
ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಜಶೇಖರ ವಂದಲಿ ಅವರು ನೀಡಿದ ದೂರಿನ ಮೇರೆಗೆ, ಆರೋಪಿಯ ವಿರುದ್ಧ ಎನ್.ಡಿ.ಪಿ.ಎಸ್ ಆಕ್ಟ್ (NDPS Act) ಕಲಂ: 27 (b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯ ಎಎಸ್ಐ ಅಣ್ಣಪ್ಪ ಕೊಪ್ಪದ ಅವರು ಈ ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ.














Leave a Reply