ಶಿರಸಿ ನಗರಸಭೆ ಜಾಗದಲ್ಲಿ ನೂತನ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಶಂಕುಸ್ಥಾಪನೆ :  ಶಾಸಕ ಭೀಮಣ್ಣ 

ಹಂಚಿಕೊಳ್ಳಿ

ಶಿರಸಿ:
ನಗರದ ಸಮಗ್ರ ಅಭಿವೃದ್ಧಿ ಹಾಗೂ ಸ್ಥಳೀಯ ವ್ಯಾಪಾರ-ವಹಿವಾಟಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಶಿರಸಿ ನಗರಸಭೆ ಮಾಲೀಕತ್ವದ ಸರ್ವೆ ನಂಬರ್ 95 ಮತ್ತು 113 ರ ಜಾಗದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ವಾಣಿಜ್ಯ ಮಳಿಗೆ ಕಾಮಗಾರಿಗೆ ಶಾಸಕ ಭೀಮಣ್ಣ ಟಿ. ನಾಯ್ಕ  ಇಂದು ಅಧಿಕೃತವಾಗಿ ಶಂಕುಸ್ಥಾಪನೆ ನೆರವೇರಿಸಿದರು.

ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, “ಶಿರಸಿ ನಗರದ ಮೂಲಸೌಕರ್ಯಗಳನ್ನು ಬಲಪಡಿಸುವುದು ಮತ್ತು ಆರ್ಥಿಕ ಚಟುವಟಿಕೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ನಗರಸಭೆಯ ಸ.ನಂ 95 ಮತ್ತು 113 ರಲ್ಲಿ ನಿರ್ಮಾಣವಾಗುತ್ತಿರುವ ಈ ಆಧುನಿಕ ವಾಣಿಜ್ಯ ಮಳಿಗೆಯು ಸ್ಥಳೀಯ ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಲಿದ್ದು, ನಗರಸಭೆಗೆ ಹೆಚ್ಚಿನ ಆದಾಯ ತರಲು ನೆರವಾಗಲಿದೆ,” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *