ಭಕ್ತರ ಅಭೀಷ್ಟೆ ಈಡೇರಿಸುವ ಶಕ್ತಿಪೀಠಕ್ಕೆ ಶಾಸಕರ ಭೇಟಿ: ಚಂದಗುಳಿ ಗಣಪನಿಗೆ ಭೀಮಣ್ಣ ನಾಯ್ಕ ವಿಶೇಷ ಮಹಾಪೂಜೆ

ಹಂಚಿಕೊಳ್ಳಿ

ಯಲ್ಲಾಪುರ:
ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ  ಭೀಮಣ್ಣ  ನಾಯ್ಕ ಅವರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಚಂದಗುಳಿ ಗ್ರಾಮದ ಶ್ರೀ ಗಂಟೆ ಗಣಪತಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ, ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನಕ್ಕೆ ಆಗಮಿಸಿದ ಶಾಸಕರನ್ನು ಅರ್ಚಕರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರು ಆತ್ಮೀಯವಾಗಿ ಬರಮಾಡಿಕೊಂಡರು. ಶಾಸಕರು  ಮಹಾಪೂಜೆ, ಅರ್ಚನೆ ನೆರವೇರಿಸಿ, ಕ್ಷೇತ್ರದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ಚಂದಗುಳಿಯ ಶ್ರೀ ಗಂಟೆ ಗಣಪತಿಯ ಕ್ಷೇತ್ರವು  ಭಕ್ತರ ಅಭೀಷ್ಟಗಳನ್ನು ಈಡೇರಿಸುವ ಶಕ್ತಿಪೀಠವಾಗಿದೆ. ಕ್ಷೇತ್ರದ ಸಮಸ್ತ ಜನರ ಸುಖ-ಶಾಂತಿ, ಅಭಿವೃದ್ಧಿ ಹಾಗೂ ಸಮೃದ್ಧಿಗಾಗಿ ಗಜಾನನನಲ್ಲಿ ಪ್ರಾರ್ಥಿಸಿದ್ದೇನೆ” ಎಂದು ಹೇಳಿದರು.

ಈ ಶುಭ ಸಂದರ್ಭದಲ್ಲಿ ಶಾಸಕರ ಕುಟುಂಬದ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಪ್ರಮುಖ ಮುಖಂಡರು, ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *