ಶ್ರೀ ಸ್ವರ್ಣವಲ್ಲಿ ಮಠದ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಅನಂತಮೂರ್ತಿ ಹೆಗಡೆ ಭಾಗಿ

ಹಂಚಿಕೊಳ್ಳಿ

ಶಿರಸಿ: ಇಲ್ಲಿನ ಐತಿಹಾಸಿಕ ಪ್ರಸಿದ್ಧ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳವರ ಚಾತುರ್ಮಾಸ್ಯ ವ್ರತಾಚರಣೆ ಧಾರ್ಮಿಕ ಕಾರ್ಯಕ್ರಮದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಅನಂತಮೂರ್ತಿ ಹೆಗಡೆ ಅವರು ತಮ್ಮ ಕುಟುಂಬದೊಂದಿಗೆ ಪಾಲ್ಗೊಂಡಿದ್ದರು.

ಸ್ವರ್ಣವಲ್ಲಿ ಮಠಕ್ಕೆ ಭೇಟಿ ನೀಡಿದ ಅವರು, ಶ್ರೀಗಳವರ ದಿವ್ಯ ಸನ್ನಿಧಿಯಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ಶ್ರೀಗಳ ಪಾದುಕಾ ಪೂಜೆ, ವಿಶೇಷ ಅರ್ಚನೆ ಹಾಗೂ ಷೋಡಶೋಪಚಾರ ಪೂಜೆಗಳನ್ನು ನೆರವೇರಿಸಿದರು. ನಂತರ ಪೂಜ್ಯ ಗುರುಗಳಿಂದ ಮಂತ್ರಾಕ್ಷತೆ ಹಾಗೂ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅನಂತಮೂರ್ತಿ ಹೆಗಡೆ ಅವರು, “ಪೂಜ್ಯ ಗುರುಗಳ ಚಾತುರ್ಮಾಸ್ಯ ವ್ರತಾಚರಣೆಯಂತಹ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗುರುಗಳ ಕೃಪೆಗೆ ಪಾತ್ರರಾಗಿರುವುದು ನನ್ನ ಮತ್ತು ನನ್ನ ಕುಟುಂಬದ ಪಾಲಿಗೆ ಅತ್ಯಂತ ಧನ್ಯತೆ ಮತ್ತು ಸೌಭಾಗ್ಯದ ಸಂಗತಿಯಾಗಿದೆ,” ಎಂದು ತಮ್ಮ ಭಾವನೆಗಳನ್ನು ಹಂಚಿಕೊಂಡರು.

Leave a Reply

Your email address will not be published. Required fields are marked *