ಗುರುಗಳ ಆಶೀರ್ವಾದ ಪಡೆದ ಶಾಸಕ ಭೀಮಣ್ಣ ನಾಯ್ಕ

ಹಂಚಿಕೊಳ್ಳಿ

ಶಿರಸಿ: ತಾಲೂಕಿನ ಸ್ವರ್ಣವಲ್ಲೀ ಮಠಕ್ಕೆ ಭೇಟಿ ನೀಡಿದ ಶಾಸಕ ಭೀಮಣ್ಣ ನಾಯ್ಕ ಅವರು ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹಾಗೂ ಶ್ರೀ ಆನಂದಬೋಧೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.

ನಂತರ ಶ್ರೀ ವಾದಿರಾಜ ಮಠಕ್ಕೆ ಭೇಟಿ ನೀಡಿದ ಅವರು, ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಚಾತುರ್ಮಾಸ್ಯ ಕಾರ್ಯಕ್ರಮದ ನಿಮಿತ್ತ ಗುರುವಂದನೆ ಸಲ್ಲಿಸಿ, ನಾಡಿನ ಕ್ಷೇಮಾಭಿವೃದ್ಧಿಗಾಗಿ ಪ್ರಾರ್ಥಿಸಿದರು.

ಬಳಿಕ ಶಿರಸಿಯ ಶ್ರೀ ಜೈನ ಮಠಕ್ಕೆ ಭೇಟಿ ನೀಡಿದ ಶಾಸಕ ಭೀಮಣ್ಣ ನಾಯ್ಕ ಅವರು ಶ್ರೀ ಕೂಷ್ಮಾಂಡಿನೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ, ‘ಶ್ರೀಗಳ ಚಾತುರ್ಮಾಸ್ಯ ವ್ರತದ ಪವಿತ್ರ ಸಂದರ್ಭದಲ್ಲಿ ಗುರುಗಳ ದರ್ಶನ ಪಡೆದು ಆಶೀರ್ವಾದ ಪಡೆದಿರುವುದು ಮನಸ್ಸಿಗೆ ಸೌಹಾರ್ದತೆ ಹಾಗೂ ಧನ್ಯತೆಯ ಭಾವ ಮೂಡಿಸಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಶ್ರೀಗಳ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಪ್ರಾರ್ಥಿಸಿದ್ದೇನೆ’ ಎಂದರು.

ಈ ಸಂದರ್ಭದಲ್ಲಿ ದೀಪಕ ದೊಡ್ಡೂರು, ಸುರೇಶ ಹಕ್ಕಿಮನೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *