
ಜೋಯಿಡಾ: ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಖಿತಾ ಮಹಾದೇವ ವೇಳಿಪ ಅವರು ಬುದ್ಧಿಬಲ (ಚೆಸ್) ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆ ಮಾಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಅ.5ರಂದು ಶಿರಸಿ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಮಟ್ಟದ ಬುದ್ಧಿಬಲ (ಚೆಸ್) ಸ್ಪರ್ಧೆಯಲ್ಲಿ ನಿಖಿತಾ ಅವರು ತೃತೀಯ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಅರ್ಹತೆ ಗಳಿಸಿದ್ದಾರೆ.
ನಿಖಿತಾ ಅವರ ಈ ಸಾಧನೆಗೆ ಗುಂದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಫಕೀರಪ್ಪ ದರಿಗೊಂಡ ಅವರು ಮಾರ್ಗದರ್ಶನ ಹಾಗೂ ಸಹಕಾರ ನೀಡಿದ್ದರು.
ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಮುಖ್ಯಾಧ್ಯಾಪಕರಾದ ಜೋಸಫ್ ಗೊನ್ಸಾಲಿಸ್, ಸಹ ಶಿಕ್ಷಕರು, ಬೋಧಕೇತರ ಸಿಬ್ಬಂದಿ, ಎಸ್ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಪಾಲಕ-ಪೋಷಕರು, ಗ್ರಾಮಸ್ಥರು ಮತ್ತು ಶಿಕ್ಷಣ ಪ್ರೇಮಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ನಿಖಿತಾ ಅವರು ಉತ್ತಮ ಪ್ರದರ್ಶನ ನೀಡಿ ಮತ್ತಷ್ಟು ಕೀರ್ತಿ ತಂದುಕೊಡಲಿ ಎಂದು ಶುಭ ಹಾರೈಸಿದ್ದಾರೆ.















Leave a Reply