ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜೋಯಿಡಾದ ಶಾಹೀಲಗೆ ಪ್ರಥಮ

ಹಂಚಿಕೊಳ್ಳಿ

ಕಟಾ ವಿಭಾಗದಲ್ಲಿ ಚಿನ್ನದ ಸಾಧನೆ; ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ

ಜೋಯಿಡಾ: ಕಾರವಾರದಲ್ಲಿ ಅಕ್ಟೋಬರ್ 11ರಂದು ನಡೆದ 2ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜೋಯಿಡಾ ತಾಲೂಕಿನ ಅಸ್ಪೈರ್ ಸ್ಪೋರ್ಟ್ಸ್ ಹಾಗೂ ಕರಾಟೆ ಅಕಾಡೆಮಿಯ ವಿದ್ಯಾರ್ಥಿ ಕುಮಾರ ಶಾಹೀಲ ಶ್ರೀಕಾಂತ ಹರಿಜನ ಗಮನಾರ್ಹ ಸಾಧನೆ ಮಾಡಿದ್ದಾರೆ. ಸ್ಪರ್ಧೆಯ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಅವರು, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಜೋಯಿಡಾ ತಾಲೂಕಿನ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ ಹರಿಜನ ಅವರ ಪುತ್ರನಾದ ಶಾಹೀಲ, ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಶಾಹೀಲ ಅವರ ಈ ಸಾಧನೆಯ ಹಿಂದೆ ಕರಾಟೆ ತರಬೇತುದಾರ ರಾಜೇಶ ಗಾವಡೆ ಅವರ ತರಬೇತಿ, ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಪ್ರಮುಖ ಪಾತ್ರ ವಹಿಸಿದೆ.

ಶಾಹೀಲ ಅವರ ಸಾಧನೆಗೆ ಕರಾಟೆ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು, ಗಣ್ಯರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಅವರು ಇನ್ನಷ್ಟು ಸಾಧನೆಗಳನ್ನು ಮಾಡಲಿ ಎಂದು ಹಾರೈಸಿದ್ದಾರೆ.

Leave a Reply

Your email address will not be published. Required fields are marked *