ಲೆಕ್ಕಾಧಿಕಾರಿಯ ‘ಲೆಕ್ಕಾಚಾರ’ ಉಲ್ಟಾ: ಹತ್ತು ಸಾವಿರದ ಆಸೆಗೆ ಬಿದ್ದು, ಲೋಕಾಯುಕ್ತರ ಅತಿಥಿಯಾದ ಸಾಹೇಬರು!

ಹಂಚಿಕೊಳ್ಳಿ

ಶಿರಸಿ: ಗುತ್ತಿಗೆ ಕಾಮಗಾರಿಯ ಬಿಲ್ ಪಾವತಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಂದ ₹10 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಶಿರಸಿ ವಿಭಾಗದ ಲೆಕ್ಕಾಧಿಕಾರಿ ಮಲ್ಲಿಕಾರ್ಜುನ ಪಾಟೀಲ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು.

ಗುತ್ತಿಗೆ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರ ನಾಗರಾಜ ಕಟ್ಟೀಮನಿ ಅವರ ಬಿಲ್ ಪಾಸ್ ಮಾಡಲು ಲೆಕ್ಕಾಧಿಕಾರಿ ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಕಚೇರಿಗೆ ತೆರಳಿ ಹಣ ನೀಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಕಾರವಾರ ಲೋಕಾಯುಕ್ತ ಪೊಲೀಸರು, ಲಂಚದ ಹಣದ ಸಮೇತ ಲೆಕ್ಕಾಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಕಾರವಾರ ಲೋಕಾಯುಕ್ತ ಇನ್ಸ್‌ಪೆಕ್ಟರ್ ರವಿ ಎನ್.ಎಂ. ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿ ಪಾಲ್ಗೊಂಡಿದ್ದರು.

ಲಂಚ ಸ್ವೀಕಾರದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *