ಆಸ್ತಿ ನೋಂದಣಿ ಮಾಡಲು ಯೋಜಿಸುತ್ತಿರುವ ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ನಾಳೆ ಅಧಿಕೃತ ರಜಾ ದಿನವಾಗಿದ್ದರೂ ಸಹ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇರುವ ಎಲ್ಲಾ ಸಬ್ ರಿಜಿಸ್ಟ್ರಾರ್ (ಉಪನೋಂದಣಿ) ಕಚೇರಿಗಳು ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ.
ಸಾರ್ವಜನಿಕರ ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸುಗಮಗೊಳಿಸುವ ಹಾಗೂ ನಾಗರಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಈ ಅತ್ಯಂತ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಸಾಮಾನ್ಯವಾಗಿ ರಜೆ ದಿನಗಳಲ್ಲಿ ಉಪನೋಂದಣಿ ಕಚೇರಿಗಳು ಸಂಪೂರ್ಣವಾಗಿ ಮುಚ್ಚಿರುತ್ತಿದ್ದವು. ಇದರಿಂದಾಗಿ ಉದ್ಯೋಗಸ್ಥರು ಹಾಗೂ ಸಾರ್ವಜನಿಕರು ಆಸ್ತಿ ನೋಂದಣಿ ಮತ್ತು ಮುದ್ರಾಂಕ ಖರೀದಿಗಾಗಿ ವಾರದ ಇತರ ದಿನಗಳಲ್ಲಿ ಕಚೇರಿಗಳಿಗೆ ಅಲೆಯಬೇಕಾದ ಅನಿವಾರ್ಯತೆ ಇತ್ತು. ಇದನ್ನು ಮನಗಂಡು ಇಲಾಖೆಯು ವಿಶೇಷ ಕ್ರಮವಾಗಿ ನಾಳೆ ರಜೆ ದಿನವಾದರೂ ಎಂದಿನಂತೆ ಕಚೇರಿಗಳಲ್ಲಿ ಎಲ್ಲಾ ಸೇವೆಗಳನ್ನು ಲಭ್ಯವಾಗುವಂತೆ ಮಾಡಿದೆ.
ಈ ಕುರಿತು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಸಾರ್ವಜನಿಕರು ಈ ರಜಾ ದಿನದ ಮುಕ್ತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ.

Leave a Reply