ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಅದ್ಧೂರಿ ಸ್ವಾಗತ ಕೋರಲು ಕುಂದಾನಗರಿ ಸಜ್ಜಾಗಿದೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಬೃಹತ್ ಮಟ್ಟದ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ವಿಮಾನ ನಿಲ್ದಾಣದತ್ತ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಅಪಾರ ಬೆಂಬಲಿಗರು ಆಗಮಿಸುತ್ತಿದ್ದಾರೆ. ನೂತನ ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಉತ್ಸಾಹ ಮುಗಿಲುಮುಟ್ಟಿದೆ.

ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಭಾವಚಿತ್ರಗಳನ್ನು ಕೈಯಲ್ಲಿ ಹಿಡಿದಿರುವ ಅಭಿಮಾನಿಗಳು, ಸಿಎಂ ಡಿಕೆಶಿ, ಜಾರಕಿಹೊಳಿ ಹಾಗೂ ಹೆಬ್ಬಾಳಕರ್ ಪರವಾಗಿ ಹರ್ಷೋದ್ಗಾರ ಮತ್ತು ಜಯಘೋಷಗಳನ್ನು ಮೊಳಗಿಸುತ್ತಿದ್ದಾರೆ. ವಿಶೇಷವಾಗಿ, ಬೆಳಗಾವಿ-ಬಾಗಲಕೋಟೆ ಹೆದ್ದಾರಿಯಲ್ಲಿ ನಾಯಕರಿಗೆ ಸ್ವಾಗತ ಕೋರಲು 4 ಜೆಸಿಬಿ ಹಾಗೂ 1 ಕ್ರೇನ್ ವ್ಯವಸ್ಥೆ ಮಾಡಲಾಗಿದ್ದು, ಬರೋಬ್ಬರಿ 1.5 ಟನ್ ಹೂವಿನ ಪುಷ್ಪವೃಷ್ಟಿ ಮಾಡಲು ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.


Leave a Reply