ರಾಜಧಾನಿ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದ ಬಳಿ ಶನಿವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರನ್ನು ಭೀಕರವಾಗಿ ಕೊ*ಲೆ ಮಾಡಿ, ಆ ಬಳಿಕ ಆರೋಪಿಯು ತಾನೂ ಆತ್ಮಹ*ತ್ಯೆ ಮಾಡಿಕೊಂಡಿರುವ ಅತ್ಯಂತ ಆಘಾತಕಾರಿ ಘಟನೆ ವರದಿಯಾಗಿದೆ.
ವೃತ್ತಿಯಲ್ಲಿ ಚಾಲಕನಾಗಿದ್ದ 34 ವರ್ಷದ ಪ್ರಶಾಂತ್ ಎಂಬಾತನೇ ಈ ಭೀಕರ ಕೃತ್ಯ ಎಸಗಿದ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ. ಆರೋಪಿ ಪ್ರಶಾಂತ್ ಕಳೆದ ಕೆಲವು ದಿನಗಳಿಂದ ತೀವ್ರ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಇಂದು ಬೆಳಿಗ್ಗೆ ಏಕಾಏಕಿ ಮಚ್ಚಿನಿಂದ ತನ್ನ ಮೂವರು ರಕ್ತಸಂಬಂಧಿಗಳನ್ನು ಅತ್ಯಂತ ಕ್ರೂರವಾಗಿ ಕೊಚ್ಚಿ ಕೊಂದಿ*ದ್ದಾನೆ.

ಈ ಭೀಕರ ಘಟನೆಯಲ್ಲಿ ಕೊ*ಲೆಯಾದವರನ್ನು ಪ್ರಶಾಂತ್ ತಾಯಿ, ಗಾರ್ಮೆಂಟ್ಸ್ ಕಾರ್ಖಾನೆಯ ಕಾರ್ಮಿಕೆಯಾಗಿದ್ದ ಮಂಗಳಮ್ಮ (55 ವರ್ಷ), ಅಜ್ಜಿ, ಕಸಗೂಡಿಸುವ ಕೆಲಸ ಮಾಡುತ್ತಿದ್ದ ನಂಜಮ್ಮ (65 ವರ್ಷ) ಹಾಗೂ ಭಾವ (ಅಕ್ಕನ ಗಂಡ), ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದ ಸತೀಶ್ (50 ವರ್ಷ) ಎಂದು ಗುರುತಿಸಲಾಗಿದೆ.
ಕೊಟ್ಟಿಗೆಪಾಳ್ಯದಲ್ಲಿ ನಡೆದ ಈ ಸಾಲು ಸಾಲು ಹೆಣಗಳ ದುರಂತದಿಂದಾಗಿ ಇಡೀ ಇಲಾಖೆ ಹಾಗೂ ಸಾರ್ವಜನಿಕ ವಲಯ ಬೆಚ್ಚಿಬಿದ್ದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃ*ತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮಾನಸಿಕ ಅಸ್ವಸ್ಥತೆಯೇ ಈ ಹತ್ಯಾಕಾಂಡಕ್ಕೆ ಮುಖ್ಯ ಕಾರಣವೇ ಅಥವಾ ಕೃತ್ಯದ ಹಿಂದೆ ಬೇರೆನಾದರೂ ಕೌಟುಂಬಿಕ ಕಲಹವಿತ್ತೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.


Leave a Reply