ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶ*ವ ಪತ್ತೆ: ಕೊ*ಲೆಯೋ ಅಥವಾ ಆತ್ಮಹ*ತ್ಯೆಯೋ ಎಂಬ ಶಂಕೆ!

ಹಂಚಿಕೊಳ್ಳಿ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಅರಣ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರ ಶ*ವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃ*ತ ಮಹಿಳೆಯನ್ನು ಹುಲ್ಯಾಳ ಗ್ರಾಮದ ನಿವಾಸಿ ಗೌರವ್ವ ಮಳ್ಳಿಗೇರಿ (32) ಎಂದು ಗುರುತಿಸಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಈಕೆ, ಇದೀಗ ಅರಣ್ಯದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶ*ವವಾಗಿ ಪತ್ತೆಯಾಗಿದ್ದಾಳೆ.

ಮೃ*ತದೇಹವು ಸಂಪೂರ್ಣವಾಗಿ ಕೊಳೆತು ಹೋಗಿದ್ದು, ಸ್ಥಳದಲ್ಲಿ ಕೇವಲ ಸೀರೆ, ತಲೆಬುರುಡೆ ಹಾಗೂ ಕೂದಲು ಮಾತ್ರ ಪತ್ತೆಯಾಗಿದೆ. ಶ*ವ ಪತ್ತೆಯಾದ ಜಾಗದಲ್ಲಿ ಸಾರಾಯಿ ಪ್ಯಾಕೆಟ್ ಹಾಗೂ ನೀರಿನ ಬಾಟಲಿಗಳು ಸಿಕ್ಕಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದ್ದು, ಇದು ಆತ್ಮಹತ್ಯೆಯೋ ಅಥವಾ ಯಾರಾದರೂ ಕೊ*ಲೆ ಮಾಡಿ ನೇಣು ಹಾಕಿದ್ದಾರೋ ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.

ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಜಮಖಂಡಿ ಸಿಪಿಐ ಮಲ್ಲಪ್ಪ ಮಡ್ಡಿ ಹಾಗೂ ಗ್ರಾಮೀಣ ಠಾಣೆಯ ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ತಾಯಿಯನ್ನು ಕಳೆದುಕೊಂಡ ಮಗು ಹಾಗೂ ಮೃ*ತ ಮಹಿಳೆಯ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Leave a Reply

Your email address will not be published. Required fields are marked *

Advertisement


This will close in 3 seconds