CM ಕಚೇರಿ ಮಾಧ್ಯಮ ಕಾರ್ಯದರ್ಶಿ-3 ಹುದ್ದೆಗೆ ರಾಘವೇಂದ್ರ ಭಟ್ ನೇಮಕಾತಿ ಅಮಾನತು: Congress ಟೀಕಿಸಿದ್ದ ಹಳೇ ಪೋಸ್ಟ್ ವೈರಲ್!

ಹಂಚಿಕೊಳ್ಳಿ

ರಾಜ್ಯ ಮುಖ್ಯಮಂತ್ರಿ ಕಚೇರಿಯ ಮಾಧ್ಯಮ ಕಾರ್ಯದರ್ಶಿ-3 ಹುದ್ದೆಗೆ ನೇಮಕಗೊಂಡಿದ್ದ ಪತ್ರಕರ್ತ ರಾಘವೇಂದ್ರ ಭಟ್ ಅವರ ನೇಮಕಾತಿ ಆದೇಶವನ್ನು ಕರ್ನಾಟಕ ಸರ್ಕಾರ ದಿಢೀರನೆ ಅಮಾನತುಗೊಳಿಸಿದೆ. ಈ ರದ್ದತಿ ಆದೇಶವು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ನೇಮಕಾತಿ ಆದೇಶ ಹೊರಬಿದ್ದ ಕೆಲವೇ ದಿನಗಳಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದೆ.

ಮೂವರು ಪತ್ರಕರ್ತರಿಗೆ ಒಲಿದಿದ್ದ ಹುದ್ದೆ

​ರಾಜ್ಯ ಸರ್ಕಾರವು ಇದೇ ಜುಲೈ 8ರಂದು ಮುಖ್ಯಮಂತ್ರಿ ಸಚಿವಾಲಯಕ್ಕೆ ಒಟ್ಟು ಮೂವರು ಮಾಧ್ಯಮ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಹಿರಿಯ ಪತ್ರಕರ್ತರಾದ ಪಿ. ತ್ಯಾಗರಾಜ್ ಅವರನ್ನು ಮಾಧ್ಯಮ ಕಾರ್ಯದರ್ಶಿ-1, ಆರ್. ಜಯಪ್ರಕಾಶ್ ಅವರನ್ನು ಮಾಧ್ಯಮ ಕಾರ್ಯದರ್ಶಿ-2 ಹಾಗೂ ರಾಘವೇಂದ್ರ ಭಟ್ ಅವರನ್ನು ಮಾಧ್ಯಮ ಕಾರ್ಯದರ್ಶಿ-3 ಆಗಿ ನೇಮಕ ಮಾಡಲಾಗಿತ್ತು. ಆದರೆ, ಈ ಮೂವರ ಪೈಕಿ ಇದೀಗ ರಾಘವೇಂದ್ರ ಭಟ್ ಅವರ ಸ್ಥಾನಕ್ಕೆ ಕುತ್ತು ಬಂದಿದೆ.

ರಾಹುಲ್ ಗಾಂಧಿ ಟೀಕಿಸಿದ್ದ ಪೋಸ್ಟ್ ವೈರಲ್!

​ರಾಘವೇಂದ್ರ ಭಟ್ ಅವರ ನೇಮಕಾತಿ ಆದೇಶ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಹಳೆಯ ಬರಹಗಳ ಕುರಿತು ಭಾರೀ ಚರ್ಚೆ ಶುರುವಾಗಿತ್ತು. 2021ರಲ್ಲಿ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ಟೀಕಿಸುವ ರೀತಿಯಲ್ಲಿ ಪೋಸ್ಟ್ ಮಾಡಿದ್ದರು ಎನ್ನಲಾದ ಹಳೆಯ ಬರಹಗಳು ದಿಢೀರ್ ವೈರಲ್ ಆಗಿದ್ದವು. ಸ್ವಪಕ್ಷವನ್ನು ಹಾಗೂ ನಾಯಕರನ್ನು ಟೀಕಿಸಿದವರಿಗೇ ಉನ್ನತ ಹುದ್ದೆ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ತಕ್ಷಣವೇ ಅವರ ನೇಮಕಾತಿಯನ್ನು ಅಮಾನತುಗೊಳಿಸಿ ಹೊಸ ಅಧಿಸೂಚನೆ ಹೊರಡಿಸಿದೆ.

Leave a Reply

Your email address will not be published. Required fields are marked *

Advertisement


This will close in 3 seconds