
ಶಿರಸಿ, : ಜು. 18: ಸಮಾಜಸೇವೆಯ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ನಮನ ಚಾರಿಟೇಬಲ್ ಟ್ರಸ್ಟ್, ಶಿರಸಿ ಹಾಗೂ ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಅಂಗವಾಗಿ ಜುಲೈ 21ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಬಚಗಾಂವನ ಶ್ರೀ ಸೋಮಲಿಂಗೇಶ್ವರ ದೇವಸ್ಥಾನದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಶಿಬಿರವನ್ನು ಶಿರಸಿ–ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮನ ಚಾರಿಟೇಬಲ್ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ನಾಗರಾಜ ಮಡಿವಾಳ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ತಿರುಮಲೇಶ ಮಡಿವಾಳ, ಟಿ.ಎಸ್.ಎಸ್. ಆಸ್ಪತ್ರೆಯ ವೈದ್ಯೆ ಡಾ. ಪೂಜಾ ಶೇಟ್ ಹಾಗೂ ಸಾಮಾಜಿಕ ಕಾರ್ಯಕರ್ತ ಅಮರ ನೆರಲಕಟ್ಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಉಚಿತ ನೇತ್ರ ತಪಾಸಣೆ ಹಾಗೂ ಅಗತ್ಯ ವೈದ್ಯಕೀಯ ಸಲಹೆಗಳನ್ನು ಶಿಬಿರದಲ್ಲಿ ನೀಡಲಾಗುವುದು. ಬಚಗಾಂವ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸೌಲಭ್ಯವನ್ನು ಪಡೆದುಕೊಳ್ಳುವಂತೆ ನಮನ ಚಾರಿಟೇಬಲ್ ಟ್ರಸ್ಟ್ ಪ್ರಕಟಣೆಯಲ್ಲಿ ಮನವಿ ಮಾಡಿದೆ.












Leave a Reply